
‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಸೆಂಬರ್ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.
ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ ೨ ಚಿತ್ರದ ಪ್ರೀಮಿಯರ್ ಶೋ ನೋಡಲು ಮಹಿಳೆಯೊಬ್ಬರು ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚಿತ್ರಮಂದಿರಕ್ಕೆ ಬಂದಿದ್ದರು. ಬುಧವಾರ ರಾತ್ರಿ ಸುಮಾರು 10;30 ಸುಮಾರಿಗೆ ಚಿತ್ರದ ಪ್ರೀಮಿಯರ್ ಶೋ ನಡೆಯುತಿದ್ದ ವೇಳೆ ನಟ ಅಲ್ಲು ಅರ್ಜುನ್ ಚಿತ್ರ ಮಂದಿರಕ್ಕೆ ಭೇಟಿ ನೀಡಿದ್ದರು.
ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.