ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ ಅರೆಸ್ಟ್

‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಡಿಸೆಂಬರ್‌ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.

ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್‌ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್‌ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ ೨ ಚಿತ್ರದ ಪ್ರೀಮಿಯರ್ ಶೋ ನೋಡಲು ಮಹಿಳೆಯೊಬ್ಬರು ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚಿತ್ರಮಂದಿರಕ್ಕೆ ಬಂದಿದ್ದರು. ಬುಧವಾರ ರಾತ್ರಿ ಸುಮಾರು 10;30 ಸುಮಾರಿಗೆ ಚಿತ್ರದ ಪ್ರೀಮಿಯರ್ ಶೋ ನಡೆಯುತಿದ್ದ ವೇಳೆ ನಟ ಅಲ್ಲು ಅರ್ಜುನ್ ಚಿತ್ರ ಮಂದಿರಕ್ಕೆ ಭೇಟಿ ನೀಡಿದ್ದರು.

ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

14 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

18 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

18 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

23 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago