ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತಾಗಿ ನಡೆಸಿದ ಸಭೆಯಲ್ಲಿ ನೀಡಿದ ಸೂಚನೆಗಳು ಈ ಕೆಳಕಂಡಂತಿವೆ….. ಓದಿ…..
– ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
– ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು.
– ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್‌ಗಳ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ.
– ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
– ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು.
– ನಾಫೆಡ್/ ಎನ್ಸಿಸಿಎಫ್‌ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.
– ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು. ಇದೇ ರೀತಿ ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು.
– ಅತ್ಯುತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು.
– ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು.
– ಸರಬರಾಜಾದ ಕಿಟ್‌ಗಳನ್ನು ನಿಗಮದ ಗೋದಾಮು/ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕು ಒಳಗಾಗಿ ವಿತರಣೆ ಮಾಡಬೇಕು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…