2025-26ನೇ ಸಾಲಿನ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 05 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಾಹ ಪ್ರೋತ್ಸಾಹಧನ ಯೋಜನೆಯ ಹೂಡಿಕೆಯ ರೂಪದಲ್ಲಿ ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ.50 ಸಾವಿರವನ್ನು ನೀಡಲಾಗುವುದು.
ಎಸ್.ಎಸ್.ಎಲ್.ಸಿ ನಂತರ ವಿಕಲಚೇತನ
ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ” ಆರೋಗ್ಯ ವಿಮಾ ಯೋಜನೆ.
07 ಬಗೆಯ ವಿಕಲಚೇತನರ ಆರೈಕೆದಾರರ ಪ್ರೋತ್ಸಾಹಧನ ಯೋಜನೆ (ಶೇ.75 ಮತ್ತು ಹೆಚ್ಚಿನ ಅಂಗವಿಕಲತೆ ಹೊಂದಿರುವ).
05 ವಿಕಲಚೇತನ ಕ್ರೀಡಾ ಪಟುಗಳಿಗೆ ಸಾಧನೆ ಯೋಜನೆಯಡಿ ಧನ ಸಹಾಯ.
ಅರ್ಜಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರು ಹತ್ತಿರದ ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಅಥವಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಂದ ಅಥವಾ ಈ ಕಛೇರಿಯಿಂದ ನಿಗದಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ,ಸಂಖ್ಯೆ:080-29787441 ಗೆ ಅಥವಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಕಚೇರಿ ಸಮಯದಲ್ಲಿ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…