ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು‌ ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.

ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು‌ ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.

ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ.‌ ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ‌ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.

ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ‌ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆ‌ಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.

ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200‌ ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

2 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago