Categories: ಐಪಿಎಲ್

ಐಪಿಎಲ್ : ಚಾಂಪಿಯನ್ಸ್ ಗೆ ಶರಣಾದ ಸೂಪರ್ ಕಿಂಗ್ಸ್

ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ನಾಲ್ಕು ಬೌಂಡರಿ ಹಾಗೂ ಒಂಬತ್ತು ಸಿಕ್ಸರ್ ಸಿಡಿಸಿ (92)ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಆದರೆ ಶತಕ ವಂಚಿತರಾದ ಇವರನ್ನು ಅಲ್ಜಾರಿ ಜೋಸೆಫ್ ಅವರ ಓವರ್ ನಲ್ಲಿ ಶುಭ್ಮಮನ್ ಗಿಲ್ ಹಿಡಿದ ಅತ್ಯುತ್ತಮ ಕ್ಯಾಚ್ ಗೆ ಬಲಿಯಾದರು.

ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಸವಾಲಿನ ಮೊತ್ತ ಬೆನ್ನಟ್ಟಿದ ಚಾಂಪಿಯನ್ಸ್ ತಂಡದ ಆರಂಭಿಕರಾದ ವೃದ್ಧಿಮಾನ್ ಸಹಾ(25) ಹಾಗೂ ಶುಭ್ ಮನ್ ಗಿಲ್ (63) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು ನಂತರ ರಾಹುಲ್ ಥೆವಾಟಿಯಾ ಹಾಗೂ ರಶೀದ್ ಖಾನ್ ಕೊನೆಯವರೆಗೂ ನಿಂತು ದಡ ಸೇರಿಸಿದರು.

ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

4 seconds ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

17 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

17 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

23 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

24 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago