ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.
ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.
ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…