ಡಿಜಿ ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಡಿಜಿ– ಐಜಿಪಿಯಾಗಿರುವ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಮೇ 22ರಂದು ಡಿಜಿ– ಐಜಿಪಿ ಹುದ್ದೆಯಿಂದ ಬಿಡುಗಡೆಯಾಗಲಿದ್ದಾರೆ. ಇದರಿಂದ ತೆರವಾಗಲಿರುವ ಹುದ್ದೆಗೆ ಅಲೋಕ್ ಮೋಹನ್ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್) ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.
ಅಲೋಕ್ ಅವರು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ. ಬಿಹಾರ ಪಾಟ್ನಾದ ಅಲೋಕ್ ಮೋಹನ್, 1987ನೇ ಬ್ಯಾಚ್‌ನ ಇವರು ಎಂ.ಎಸ್ಸಿ ಹಾಗೂ ಎಂ.ಫಿಲ್ ವ್ಯಾಸಂಗ ಮಾಡಿದ್ದಾರೆ.. ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕವನ್ನು ಪಡೆದಿದ್ಧಾರೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.