ಐಸಿಸಿ ಚಾಂಪಿಯನ್ಸ್ ಟ್ರೋಫಿ: ಕೀವಿಸ್ ಕಿವಿ ಹಿಂಡಿ ಟ್ರೋಫಿಗೆ ಮುತ್ತಿಟ್ಟ ರೋಹಿತ್ ಪಡೆ

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳ ಜಯ ದಾಖಲಿಸುವ ಮೂಲಕ ರೋಹಿತ್ ಪಡೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡದ ನಾಯಕ ಸ್ಯಾಂಟ್ನರ್ ಆಯ್ಕೆಯನ್ನು ಸಮರ್ಥಿಸುವ ಆಟವಾಡಿದ ಆರಂಭಿಕ ಆಟಗಾರರಾದ ರಚಿನ್ ರವೀಂದ್ರ (37) ಹಾಗೂ ವಿಲ್ ಯಂಗ್ (15) ರನ್ ಗಳಿಸಿ ಉತ್ತಮ ಆರಂಭ ನೀಡಿದರು.

ಮಾದ್ಯಮ ಕ್ರಮಾಂಕದ ಆಟಗಾರರಾದ ಮಿಚೆಲ್ (63), ಫಿಲಿಪ್ಸ್ (34) ಹಾಗೂ ಬ್ರೇಸ್ವೆಲ್ (53) ರನ್ ಪೇರಿಸಿ ತಂಡದ ಮೊತ್ತವನ್ನು 250 ಗಡಿ ದಾಟಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಕಬಳಿಸಿದರೆ ಶಮಿ‌ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (76) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (31) ಶತಕದ ಜೊತೆಯಾಟದ ನೆರವಿನಿಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು, ಗ್ಲೇನ್ ಫಿಲಿಪ್ಸ್ ಹಿಡಿದು ಅದ್ಭುತ ಕ್ಯಾಚ್ ಗಿಲ್ ಅನ್ನು ಪೆವಿಲಿಯನ್ ಗೆ ಕಳುಹಿಸಿತು.

ನಂತರ ಬಂದ ಕೋಹ್ಲಿ ಎಲ್ಬಿ ಬೆಲೆಗೆ ಬಿದ್ದು ನಿರಾಸೆ ಮೂಡಿಸಿದರು, ಆದರೆ ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (48), ಅಕ್ಷರ್ ಪಟೇಲ್ (29) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್ . ರಾಹುಲ್ (34) ರನ್ ನೆರವಿನಿಂದ ಟೀಂ ಇಂಡಿಯಾ ಗೆಲುವಿನ ಕೇಕೆ ಹಾಕಿದರು.

ಟೂರ್ನಿಯ ಉದ್ದಕ್ಕೂ ಉತ್ತಮ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದ ನ್ಯೂಜಿಲೆಂಡ್ ತಂಡದ ಆರಂಭಿಕ ಆಟಗಾರ ರಚಿನ್ ರವೀಂದ್ರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಪ್ರಮುಖ ಕಾರಣರಾದ ನಾಯಕ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

11 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

16 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

16 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

21 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago