ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.
ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ತಲುಪಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡರು ಆದರೆ ಆರಂಭಿಕ ಆಟಗಾರರಾದ ಕೂಪರ್ (೦) ಶೂನ್ಯಕ್ಕೆ ಪೆವಿಲಿಯನ್ ಗೆ ಮರಳಿದರು, ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ (73), ಆರಂಭಿಕ ಆಟಗಾರ ಮ್ಯಾಥ್ಯೂ ಹೇಡ್ (39) , ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಲಬುಷನ್ಗೆ (29) ಹಾಗೂ ಕ್ಯಾರಿ (61) ರನ್ ಗಳ ಬಲದಿಂದ 264 ರನ್ ಗಳಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (28) ಬಿರುಸಿನ ಆರಂಭ ನೀಡಿದರು, ವಿರಾಟ್ ಕೊಹ್ಲಿ ಆಕರ್ಷಕ ಐದು ಬೌಂಡರಿ ನೆರವಿನಿಂದ (84), ಮಾದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (45), ರಾಹುಲ್ (42), ಅಕ್ಷರ್ ಪಟೇಲ್ (27) ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಮೂರು ಸಿಕ್ಸರ್ ನೆರವಿನಿಂದ (28) ತಂಡವನ್ನು ಗೆಲುವಿನ ದಡ ಸೇರಿಸಿದರು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮದ್ ಶಮಿ ಮೂರು ವಿಕೆಟ್ ಪಡೆದರೆ ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು, ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…