ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.

ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್‌ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.

ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.

ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago