2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಸೇವಾ ಸಿಂಧು ವೆಬ್ ಪೋರ್ಟಲ್ https://sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಲು ಸೆ.16 ನ್ನು ಅಂತಿಮ ದಿನಾಂಕವನ್ನಾಗಿ ಘೋಷಿಸಲಾಗಿತ್ತು, ಪ್ರಸ್ತುತ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 25ಕ್ಕೆ ವಿಸ್ತರಿಸಲಾಗಿದ್ದು, ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ತರಬೇತಿಯ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಲು ವಿವರಗಳು ಈ ಕೆಳಕಂಡಂತಿವೆ.
1.ಕೋರ್ಸ್ ವಿವರ
ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ.
2.ತರಬೇತಿಯ ಅವಧಿ
10 ತಿಂಗಳು.
3.ವಯಸ್ಸು
21 ರಿಂದ 35 ವರ್ಷ.
4.ವಿದ್ಯಾರ್ಹತೆ
ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.
5.ಅಭ್ಯರ್ಥಿಯ ಸಾಮಾನ್ಯ ಅರ್ಹತೆ
1) ಅಭ್ಯರ್ಥಿಯು, ಕರ್ನಾಟಕ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
2) ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
6.ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
7.ಅರ್ಜಿ ಸಲ್ಲಿಸುವ ವೆಬ್ ಸೈಟ್
https://sevasindhu.karnataka.gov.in/Sevasindhu/DepartmentService
https://dom.karnataka.gov.in
8.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
25.09.2023
9.ತರಬೇತಿಯ ವಿಧಗಳು
ಇಲಾಖಾ ವತಿಯಿಂದ ಯಾವುದೇ ತರಬೇತಿ ಪಡೆಯದ ಹೊಸ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಬೇತಿಯನ್ನು ನೀಡಲಾಗುವುದು.
ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ತರಬೇತಿಯನ್ನು ಪಡೆದಿದ್ದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಹೊರತು ಪಡಿಸಿ ಉಚಿತ ವಸತಿಯೊಂದಿಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ತರಬೇತಿ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಕಚೇರಿ ದೂರವಾಣಿ ಸಂಖ್ಯೆ
1.ಜಿಲ್ಲಾ ಕಚೇರಿ, ದೇವನಹಳ್ಳಿ080- 29787455
2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875
3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು 8660197516
4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು 8861926851
5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು 7676905779
6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…