ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರಿಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ದಿನಾಂಕ ವಿಸ್ತರಣೆ

2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಸೇವಾ ಸಿಂಧು ವೆಬ್ ಪೋರ್ಟಲ್ https://sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಲು ಸೆ.16 ನ್ನು ಅಂತಿಮ ದಿನಾಂಕವನ್ನಾಗಿ ಘೋಷಿಸಲಾಗಿತ್ತು, ಪ್ರಸ್ತುತ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 25ಕ್ಕೆ ವಿಸ್ತರಿಸಲಾಗಿದ್ದು, ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ತರಬೇತಿಯ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಲು ವಿವರಗಳು ಈ ಕೆಳಕಂಡಂತಿವೆ.

1.ಕೋರ್ಸ್ ವಿವರ

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ.

2.ತರಬೇತಿಯ ಅವಧಿ

10 ತಿಂಗಳು.

3.ವಯಸ್ಸು

21 ರಿಂದ 35 ವರ್ಷ.

4.ವಿದ್ಯಾರ್ಹತೆ

ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.

5.ಅಭ್ಯರ್ಥಿಯ ಸಾಮಾನ್ಯ ಅರ್ಹತೆ

1) ಅಭ್ಯರ್ಥಿಯು, ಕರ್ನಾಟಕ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.

2) ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

6.ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

7.ಅರ್ಜಿ ಸಲ್ಲಿಸುವ ವೆಬ್ ಸೈಟ್

https://sevasindhu.karnataka.gov.in/Sevasindhu/DepartmentService

https://dom.karnataka.gov.in

8.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

25.09.2023

9.ತರಬೇತಿಯ ವಿಧಗಳು

ಇಲಾಖಾ ವತಿಯಿಂದ ಯಾವುದೇ ತರಬೇತಿ ಪಡೆಯದ ಹೊಸ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಬೇತಿಯನ್ನು ನೀಡಲಾಗುವುದು.

ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ತರಬೇತಿಯನ್ನು ಪಡೆದಿದ್ದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೆ  ಪೂರ್ಣ ಪ್ರಮಾಣದ ತರಗತಿಗಳನ್ನು ಹೊರತು ಪಡಿಸಿ ಉಚಿತ ವಸತಿಯೊಂದಿಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ತರಬೇತಿ ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

ಕಚೇರಿ ದೂರವಾಣಿ ಸಂಖ್ಯೆ

1.ಜಿಲ್ಲಾ ಕಚೇರಿ, ದೇವನಹಳ್ಳಿ080- 29787455

2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875

3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು 8660197516

4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು 8861926851

5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು 7676905779

6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಸಂಪರ್ಕಿಸಬಹುದು ಎಂದು    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

53 minutes ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

12 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

19 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

22 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

24 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago