ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ

2023-24 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ದಿನಾಂಕ 06/09/2023 ರಿಂದ 16/09/2023 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ತರಬೇತಿಯ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿವರಗಳು ಈ ಕೆಳಕಂಡಂತಿವೆ. ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿಯು 10 ತಿಂಗಳಾಗಿದ್ದು, ವಯಸ್ಸು 21 ರಿಂದ 35 ವರ್ಷ ವಯಸ್ಸಿನವರಾಗಿರಬೇಕು.
ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.

ಅಭ್ಯರ್ಥಿಯು, ಕರ್ನಾಟಕ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ  ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.  ಅರ್ಜಿ ಸಲ್ಲಿಸುವ ವೆಬ್ ಸೈಟ್
https://sevasindhu.Karnataka.gov.in/Sevasindhu/Department services
https://dom.Karnataka.gov.in ನಲ್ಲಿ ಸಲ್ಲಿಸಬಹುದು.

ಇಲಾಖಾ ವತಿಯಿಂದ ಯಾವುದೇ ತರಬೇತಿ ಪಡೆಯದ ಹೊಸ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಬೇತಿಯನ್ನು ನೀಡಲಾಗುವುದು. ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ತರಬೇತಿಯನ್ನು ಪಡೆದಿದ್ದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೆ  ಪೂರ್ಣ ಪ್ರಮಾಣದ ತರಗತಿಗಳನ್ನು  ಹೊರತು ಪಡಿಸಿ ಉಚಿತ ವಸತಿಯೊಂದಿಗೆ ಪ್ರತಿಷ್ಠಿತ  ಸಂಸ್ಥೆಯಿಂದ ತರಬೇತಿ ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
1.ಜಿಲ್ಲಾ ಕಚೇರಿ, ದೇವನಹಳ್ಳಿ 080- 29787455,
2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875,
3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು
8660197516,
4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು
8861926851,
5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು
7676905779,
6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ
8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *