ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಜುಲೈ 24 ರಿಂದ ಆಗಸ್ಟ್ 31 ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

*ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ*

ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.

*ಅಭ್ಯರ್ಥಿಯ ಸಾಮಾನ್ಯ ಅರ್ಹತೆ-* ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

*ಆಯ್ಕೆ ವಿಧಾನ-* ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices
2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 hour ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago