ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಆಗಸ್ಟ್ 31 ರವರೆಗೆ ಅಂತಿಮ ದಿನವನ್ನಾಗಿ ಘೋಷಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕೊನೆಯ ದಿನವು ಸೆಪ್ಟೆಂಬರ್ 10 ಕ್ಕೆ ವಿಸ್ತರಿಸಲಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.

ಅಭ್ಯರ್ಥಿಯ ಸಾಮಾನ್ಯ ಅರ್ಹತೆ- ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ಆಯ್ಕೆ ವಿಧಾನ- ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices, 2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

10 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

16 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago