2023-24 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ದಿನಾಂಕ 06/09/2023 ರಿಂದ 16/09/2023 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ತರಬೇತಿಯ ಅವಧಿ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿವರಗಳು ಈ ಕೆಳಕಂಡಂತಿವೆ. ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿಯು 10 ತಿಂಗಳಾಗಿದ್ದು, ವಯಸ್ಸು 21 ರಿಂದ 35 ವರ್ಷ ವಯಸ್ಸಿನವರಾಗಿರಬೇಕು.
ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.
ಅಭ್ಯರ್ಥಿಯು, ಕರ್ನಾಟಕ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ವೆಬ್ ಸೈಟ್
https://sevasindhu.Karnataka.gov.in/Sevasindhu/Department services
https://dom.Karnataka.gov.in ನಲ್ಲಿ ಸಲ್ಲಿಸಬಹುದು.
ಇಲಾಖಾ ವತಿಯಿಂದ ಯಾವುದೇ ತರಬೇತಿ ಪಡೆಯದ ಹೊಸ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಬೇತಿಯನ್ನು ನೀಡಲಾಗುವುದು. ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ತರಬೇತಿಯನ್ನು ಪಡೆದಿದ್ದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಹೊರತು ಪಡಿಸಿ ಉಚಿತ ವಸತಿಯೊಂದಿಗೆ ಪ್ರತಿಷ್ಠಿತ ಸಂಸ್ಥೆಯಿಂದ ತರಬೇತಿ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
1.ಜಿಲ್ಲಾ ಕಚೇರಿ, ದೇವನಹಳ್ಳಿ 080- 29787455,
2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು 9986874875,
3.ತಾಲ್ಲೂಕು ಮಾಹಿತಿ ಕೇಂದ್ರ, ನೆಲಮಂಗಲ ತಾಲ್ಲೂಕು
8660197516,
4.ತಾಲ್ಲೂಕು ಮಾಹಿತಿ ಕೇಂದ್ರ, ದೇವನಹಳ್ಳಿ ತಾಲ್ಲೂಕು
8861926851,
5.ತಾಲ್ಲೂಕು ಮಾಹಿತಿ ಕೇಂದ್ರ, ಹೊಸಕೋಟೆ ತಾಲ್ಲೂಕು
7676905779,
6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ
8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…