ದೇವನಹಳ್ಳಿ: ಮಿಡ್‌ನೈಟ್‌ನಲ್ಲಿ ಒಂಟಿ ಮನೆಗೆ ನುಗ್ಗಿದ ಮೂವರು ಮುಸುಕುಧಾರಿ ದರೋಡೆಕೋರರು, ಮನೆಯ ಮಾಲೀಕ ಹಾಗೂ ಅವರ ಪತ್ನಿಗೆ ಚಾಕು ತೋರಿಸಿ ಪ್ರಾಣ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲೆ ಮಾರೇಗೌಡ ಎಂಬುವವರ ಮನೆಗೆ ತಡರಾತ್ರಿ ಮೂವರು ಖದೀಮರು ನುಗ್ಗಿದ್ದಾರೆ. ಮುಖಕ್ಕೆ ಮಾಸ್ಕ್ ಹಾಗೂ ಮಂಕಿ ಕ್ಯಾಪ್ ಧರಿಸಿಕೊಂಡು ಬಂದಿದ್ದ ಆರೋಪಿಗಳು, ಸಿಮೆಂಟ್ ಇಟ್ಟಿಗೆಯಿಂದ ಮನೆಯ ಮುಖ್ಯ ಬಾಗಿಲನ್ನು ಹೊಡೆದು ಒಳಪ್ರವೇಶಿಸಿದ್ದಾರೆ.
ನಂತರ ಮನೆಯಲ್ಲಿದ್ದ ಮಾಲೀಕ ಮಲೆ ಮಾರೇಗೌಡ ಹಾಗೂ ಅವರ ಪತ್ನಿಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಕೆ ಹಾಕಿದ್ದಾರೆ. ಪ್ರಾಣಭಯ ಉಂಟುಮಾಡಿ ಮನೆಯ ಕೋಣೆಯಲ್ಲಿದ್ದ ಬೀರುವಿನಲ್ಲಿನ 117 ಗ್ರಾಂ ಚಿನ್ನಾಭರಣ ಹಾಗೂ 8 ಸಾವಿರ ರೂಪಾಯಿ ನಗದನ್ನು ದೋಚಿದ್ದಾರೆ.
ದರೋಡೆ ನಡೆಸಿದ ಬಳಿಕ ಮನೆಯಲ್ಲಿದ್ದ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ, ಈ ಮನೆಗೆ ಕೇವಲ ಒಂದು ತಿಂಗಳ ಹಿಂದಷ್ಟೇ ಗೃಹಪ್ರವೇಶ ನಡೆದಿತ್ತು. ಹೊಸ ಮನೆಯಲ್ಲಿನ ಸಂತಸದ ವಾತಾವರಣ ಮಾಸುವ ಮುನ್ನವೇ ದರೋಡೆಕೋರರು ದಾಳಿ ನಡೆಸಿರುವುದು ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ.
ಘಟನೆ ತಿಳಿಯುತ್ತಿದ್ದಂತೆ ವಿಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರ ತಂಡವೂ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಮೂವರು ದರೋಡೆಕೋರರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಹಾಡಹಗಲೇ ಅಲ್ಲ, ತಡರಾತ್ರಿಯಲ್ಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ನುಗ್ಗಿ ದಂಪತಿಗೆ ಚಾಕು ತೋರಿಸಿ ದರೋಡೆ ನಡೆಸಿರುವ ಘಟನೆ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ.
ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…
ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ…
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ…