ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ.
ಆರೋಪಿ ದಿನಾಂಕ 05-11-2023 ರಂದು ಮಡಿಕೇರಿ ನಗರದ IDBI, ಬ್ಯಾಂಕ್ ಎದುರು, ಸಾಕಮ್ಮ ಪ್ರಭಾಕರ್ ಎಂಬುವವರು ಒಂಟಿಯಾಗಿ ವಾಸವಿದ್ದ ಮನೆಗೆ ಹೊಂಚು ಹಾಕಿ ನುಗ್ಗಿದ್ದಾನೆ. ಅವರ ಮೇಲೆ ಹಲ್ಲೆ ಮಾಡಿ ತಲೆಗೆ ಗಾಯಗೊಳಿಸಿ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಮತ್ತು ಕೈ ಬೆರಳಿನಲ್ಲಿದ್ದ ಉಂಗುರವನ್ನು ಕಸಿದುಕೊಂಡು ಪರಾರಿ ಆಗಿದ್ದ.
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ 397 IPC ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿ ದಿನಾಂಕ 06-11-2023 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಹೆಡ್ ಕಾನ್ಸ್ ಟೇಬಲ್ ಗಳಾದ ಎ.ವಿ. ಕಿರಣ್ ಮತ್ತು ಡಿ. ಹೆಚ್. ಸುಮಿತಾ ಹಾಗೂ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 02-01-2024 ರಂದು ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ. ಪ್ರಶಾಂತಿ ಅವರು ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ದಿನಾಂಕ 09-04-2025 ರಂದು ಆರೋಪಿ ವಿಕಾಸ್ ಜೋರ್ಡಿಯಾನಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿದ್ದಾರೆ.
ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಇಲಾಖೆಯ ಪರವಾಗಿ ಸರಕಾರಿ
ಅಭಿಯೋಜಕರಾದ ಎನ್.ಪಿ. ದೇವೇಂದ್ರ ಅವರು ವಾದ ಮಂಡಿಸಿದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…