ಗೌರಿಬಿದನೂರು: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಚಿನ್ನದ ಓಲೆಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಮಂಚೇನಹಳ್ಳಿ ಪೊಲೀಸರು ಕೇವಲ ಒಂದು ದಿನದಲ್ಲೇ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 18ರಂದು ಗೌರಿಬಿದನೂರು ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ 80 ವರ್ಷದ ಸುಬ್ಬಮ್ಮ ಎಂಬ ವೃದ್ಧೆ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸುಬ್ಬಮ್ಮ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಮೃತರ ಮೊಮ್ಮಗ ನೀಡಿದ ದೂರಿನ ಮೇರೆಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಗೌರಿಬಿದನೂರು ವೃತ್ತದ ವೃತ್ತ ನಿರೀಕ್ಷಕ ಅಂಜನ್ ಕುಮಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಒಂದೇ ದಿನದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಕುಮಾರ್ ಬಿ.ಜಿ (29) ಎಂದು ಗುರುತಿಸಲಾಗಿದೆ. ಆತ ಬಸವನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಶಾಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗನ್ನಾಥ ರೈ ಹಾಗೂ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ಆರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣವನ್ನು ಶೀಘ್ರವಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಸಾರ್ವಜನಿಕರು ಮನೆಯಲ್ಲಿ ವಯೋವೃದ್ಧರನ್ನು ಒಂಟಿಯಾಗಿ ಬಿಟ್ಟು ಹೋಗದಂತೆ ಹಾಗೂ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…
ದೊಡ್ಡಬಳ್ಳಾಪುರ: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವ ನಿರ್ಧಾರವನ್ನು ವಿರೋಧಿಸುವುದು ಸರಿಯಲ್ಲ.…
ದೊಡ್ಡಬಳ್ಳಾಪುರ: ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಳಂಬ, ಸ್ಥಳೀಯ ಶಾಸಕರು ಶಿಷ್ಟಾಚಾರ ಪಾಲನೆ ಮಾಡದಿರುವುದು ಸೇರಿದಂತೆ ಕ್ಷೇತ್ರದ ವಿವಿಧ…
ಕಲಬುರಗಿ: ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ ಪರಿಣಾಮ ಭೀಕರ ಸ್ಫೋಟ…
ದೇವನಹಳ್ಳಿ: ತಡರಾತ್ರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ದೇವನಹಳ್ಳಿ ಪಟ್ಟಣದ ಇಬ್ಬರು ಪ್ರಾಣ ಸ್ನೇಹಿತರು ಸ್ಥಳದಲ್ಲೇ…
ದೊಡ್ಡಬಳ್ಳಾಪುರ: ಬೆಳಕಿನ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯೊಂದು 12 ವರ್ಷದ ಬಾಲಕನ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಬೇರೆಯವರು ಸಿಡಿಸಿದ ರಾಕೆಟ್…