‘‘ಒಂದು ದೇಶ ಒಂದು ಚುನಾವಣೆ’’ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ವಿಚಾರ:‌ ಇಡೀ ವ್ಯವಸ್ಥೆಗೆ ವಿರುದ್ಧವಾಗಿದೆ‌-ಸಿಎಂ ಸಿದ್ದರಾಮಯ್ಯ ಕಿಡಿ

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’. ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಪ್ರಧಾನಿ ನರೇಂದ್ರ‌ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಸಿಎಂ‌ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಗುಡುಗಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದರು.

ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಹೇಳಿದರು.

ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ ಎಂದರು.

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಹೇಳಿದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

8 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

10 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

13 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

15 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

17 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

17 hours ago