ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರ ಖರೀದಿ: ನಾಳೆಯಿಂದ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭ

ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಪಶು ಆಹಾರ ತಯಾರಿಕೆಗಾಗಿ ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲದರಕ್ಕೆ ರೂ.160ರಂತೆ ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್‌ಗೆ 2,250ರೂ. ರಂತೆ ಖರೀದಿಸಲು ಉದ್ದೇಶಿಸಲಾಗಿದೆ. ನವೆಂಬರ್‌ 13ರಿಂದ ಮೆಕ್ಕೆಜೋಳ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುತ್ತದೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಕೃಷಿ ಇಲಾಖೆಯಡಿ ಬರುವ ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಣಿಯಾಗಿರುವ ಸಂಸ್ಥೆಯೊಂದಿಗೆ ಹಾಲಿನ ಸಂಘಕ್ಕೆ ಭೇಟಿ ನೀಡಿ ಮಕ್ಕೆಜೋಳ ಸರಬರಾಜು ಮಾಡಲು ನೋಂದಾಯಿಸಿ ಸ್ವೀಕೃತಿ ಪತ್ರ ಪಡೆಯುವುದು ಕಡ್ಡಾಯ.

ಫ್ರೂಟ್ಸ್ ನೋಂದಾಣಿಗೆ ತೊಂದರೆಯಾಗಿದ್ದರೆ ಹತ್ತಿರದ ರೈತ ಸೇವಾ ಕೇಂದ್ರಗಳಿಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ. ನೋಂದಣಿ ನಂತರ ನೋಂದಣಿ ದೃಢೀಕರಿಸಲು ರೈತರು ಮೆಕ್ಕೆಜೋಳವನ್ನು ಹಾಲು ಒಕ್ಕೂಟದ ಮೂಲಕ ಪಶು ಆಹಾರ ಘಟಕಕ್ಕೆ ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ.

Leave a Reply

Your email address will not be published. Required fields are marked *