Categories: ಕೋಲಾರ

ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ ಎಲ್ಲಾ ಸಮುದಾಯಗಳಿಗೆ ಆದರ್ಶ- ಸಚಿವ ಬೈರತಿ ಸುರೇಶ್

ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ ಎಂದರು.

ದೇಶವನ್ನು ಹೊಡೆದು ಆಳುವ ಸರಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡಲಿದ್ದಾರೆ ಅವರನ್ನು ದೂರವಿಡಿ ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ. ಮೈತ್ರಿ, ತಹಶಿಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

7 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

11 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

18 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

22 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

1 day ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 day ago