ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕವನ್ನು ಡಿಸೆಂಬರ್ 15 ರ ವರೆಗೆ ವಿಸ್ತರಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹೊಂದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಮಾಹೆಯಾನ ರೂ.15000 ಗಳ ಸ್ಟೇಫಂಡ್ ನೀಡಲಾಗುವುದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಆಧಾರ್, ಎಸ್.ಎಸ್. ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ತ್ರಿ-ಪ್ರತಿಯಲ್ಲಿ 2023ರ ಡಿಸೆಂಬರ್ 15 ರೊಳಗಾಗಿ ಉಪನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.17, ಭಗವಾನ್ ಮಾಹಾವೀರ ರಸ್ತೆ, ವಾರ್ತಾ ಸೌಧ, 2ನೇ ಮಹಡಿ, ಇನ್‌ಫೆಂಟ್ರಿ ರಸ್ತೆ, ಬೆಂಗಳೂರು-560001 ಗೆ ಸಲ್ಲಿಸುವುದು.
ಆಸಕ್ತರು ಅರ್ಹತೆಗಳು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿ ಅಥವಾ ಮೊ. ಸಂಖ್ಯೆ: 9480841249 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…