ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್ ಮರ್ಡರ್ ನಲ್ಲಿ ಅಂತ್ಯವಾಗಿದೆ. ಆನೇಕಲ್‌ನಲ್ಲಿ ಅಪಹರಣವಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದೆ.
ಆನೇಕಲ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಲಾಗಿದೆ.
ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಮೊನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಆತನ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾರ್ಚ್ 08ರಂದು ಸ್ನೇಹಿತನಿಗೆ ಹೆಣ್ಣು ನೋಡುವ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸಾಗ್ತಿದ್ದ ಗೋಪಾಲ್ ಕಾರಿಗೆ ಇನ್ನೊಂದು ಕಾರು ಡಿಕ್ಕಿಯಾಗಿತ್ತು. ಈ ವೇಳೆ ಕಾರಿನಿಂದ ಇಳಿಯುತ್ತಿದ್ದಂತೆ ಗೋಪಿ ಹಾಗೂ ಸ್ನೇಹಿತ ಅತೀಶ್ಗೆ ಪೆಪ್ಪರ್ಸ್ಪ್ರೇ ಹೊಡೆದ ಕಿರಾತಕರ ಗ್ಯಾಂಗ್ ಗೋಪಿಯನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್ ಆಗಿತ್ತು.
ಇನ್ನು ಘಟನೇ ನಡೀತಿದ್ದಂತೆ ಗೋಪಾಲ್ ಜೊತೆಗಿದ್ದ ಸ್ನೇಹಿತ ಸತೀಶ್ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಕುಟುಂಬಸ್ಥರೂ ಕೂಡಾ ಹೊನ್ನಕಳಶಾಪುರದ ಮೋಹನ್ ಬಾಬು ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಮಾರ್ಚ್ 09ರಂದು ತಮಿಳುನಾಡಿನ ಡೆಂಕಣೀಕೋಟೆ ಬಳಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಗೋಪಿ ಶವ ಪತ್ತೆಯಾಗಿದೆ. ರೊಚ್ಚಿಗೆದ್ದ ಕುಟುಂಬಸ್ಥರು ಆನೇಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೆ ,ಆರೋಪಿ ಮೋಹನ್ ಬಾಬು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಅಂದಹಾಗೆ ಮೃತ ಗೋಪಾಲ್ ಹಾಗೂ ಆರೋಪಿ ಮೋಹನ್ ಬಾಬು ಮೊದಲು ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. 10 ವರ್ಷದ ಹಿಂದೆ ಗೋಪಾಲ್ ಸ್ವಾತಿ ಎಂಬ ಯುವತಿಯನ್ನ ಮದುವೆಯಾಗಿದ್ದ. ಆದ್ರೆ ಮೋಹನ್ಗೂ ಆಕೆ ಮೇಲೆ ಮೋಹವಿತ್ತಂತೆ. ಇದು ಇಬ್ಬರ ಮಧ್ಯೆ ದ್ವೇಷಕ್ಕೆ ಕಾರಣವಾಗಿದೆ. ಜೊತೆಗೆ ವ್ಯವಹಾರದಲ್ಲೂ ಏಳಿಗೆ ಸಹಿಸದ ಮೋಹನ್, 2 ವರ್ಷದ ಹಿಂದೆಯೂ ಗೋಪಿಯನ್ನ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ನಂತೆ. ಆದ್ರೆ , ಮಾರ್ಚ್ 08 ಮಾತ್ರ 25 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಮೋಹನ್ ಬಾಬು ಆತನ ಜೀವವನ್ನೇ ತೆಗೆದಿದ್ದಾನೆ.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…