ದೇವನಹಳ್ಳಿ ತಾಲ್ಲೂಕು, ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಯಸಂದ್ರ ಗ್ರಾಮದಲ್ಲಿ ಒಂದೇ ಕಾಮಗಾರಿಗೆ ಎರಡು ಕಡೆ ಬಿಲ್ ಪಾವತಿಸಿರುವ ಬಗ್ಗೆ ಸುದ್ದಿ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನ ಲೆಕ್ಕಶೀರ್ಷಿಕೆ 5054ರಡಿ ಕಾಮಗಾರಿಯನ್ನು ಅನುಷ್ಠಾನಗೊಳಿಸಿ ಪೂರ್ಣಗೊಂಡ ಕಾಮಗಾರಿಗೆ ಮತ್ತೊಮ್ಮೆ ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲ ನಿಧಿಯಡಿ ರೂ.4.99ಲಕ್ಷಗಳ ಅಂದಾಜು ಮೊತ್ತದಲ್ಲಿ ರಾಯಸಂದ್ರ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಶ್ರೀ ಮುನಿಕೃಷ್ಣಪ್ಪ ತೋಟದಿಂದ ಪರಿಶಿಷ್ಟ ಪಂಗಡ ಮುನಿರಾಜು ತೋಟದವರೆಗೆ ರಸ್ತೆ ಮತ್ತು ಮೋರಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಬಿಲ್ಲು ಮತ್ತು ದಾಖಲೆಗಳನ್ನು ಸೃಜಿಸಿಕೊಂಡು ಬಿಲ್ಲು ಪಾವತಿಸಿರುವ ಹಿನ್ನೆಲೆಯಲ್ಲಿ ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಕೆಂಪರಾಜಯ್ಯರನ್ನು ನ19ರಂದು ಅಮಾನತುಗೊಳಿಸಿ ಆದೇಶಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಹಾಗೂ ಇಲಾಖಾ ವಿಚಾರಣಾ ಕೈಗೊಳ್ಳಲು ಕ್ರಮಕೈಗೊಳ್ಳಲಾಗಿದೆ.
ಕಾಮಗಾರಿಯನ್ನು ನಿರ್ಮಾಣ ಮಾಡದೇ, ಅಕ್ರಮವಾಗಿ ಬಿಲ್ಲು ಪಾವತಿಸಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಿನಾಂಕ: 20-11-2025ರಂದು ಎಫ್.ಐ.ಆರ್. ದಾಖಲಿಸಲಾಗಿದೆ.
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…