ಕತ್ತಿಯಿಂದ ಕಡಿದು ನಾಲ್ವರ ಬರ್ಬರ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿ ನಡೆದಿದೆ.
ತೋಟ ಕಾರ್ಮಿಕರಾಗಿರುವ ಕರಿಯ, ಗೌರಿ, ನಾಗಿ, 6 ವರ್ಷದ ಕಾವೇರಿ ಹತ್ಯೆಗೀಡಾದವರಾಗಿದ್ದಾರೆ.
ಕಾರ್ಮಿಕ ಗಿರೀಶ್ ಎಂಬುವನಿಂದ ಈ ಭೀಕರ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೇರಳ ರಾಜ್ಯದ ವೈನಾಡು ಜಿಲ್ಲೆಯ ತಾಲಪೋಯ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಲ್ಲಿನ ಪೊಲೀಸ್ ಠಾಣೆಯ ಎ ಎಸ್ ಐ ಟಿ. ಅನೀಶ್, ವಿಶೇಷ ಶಾಖೆಯ ಠಾಣಾಧಿಕಾರಿಯಾದ ಜಿ ಅನಿಲ್, ಸಿಬ್ಬಂದಿ ಶಫೀರ್ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಗಿರೀಶ್ ವೈನಾಡು ಜಿಲ್ಲೆಯ ತಿರುನಲ್ಲಿಯ ಉಣಿತು ಪರಂಬು ಗ್ರಾಮದವನಾಗಿದ್ದಾನೆ ಎಂದು ಹೇಳಲಾಗಿದೆ.
ಕೂಲಿ ಕೆಲಸಕ್ಕಾಗಿ ಇವರೆಲ್ಲ ಕೊಡಗಿಗೆ ಬಂದು ಬೇಗೂರು ಗ್ರಾಮದಲ್ಲಿ ನೆಲೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ .
ಇದೀಗ ಕೇರಳ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.