ಒಂದೇ ಕುಟುಂಬದ ನಾಲ್ವರು ಮಲಗಿದ್ದ ಮಗ್ಗಲಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊಲೆಯರಳ್ಳಿ ಬಳಿಯ ಕೋಳಿಫಾರಂನಲ್ಲಿ ನಡೆದಿದೆ.
ನೇಪಾಳ ಮೂಲದವರಾದ ಕಾಲೇ ಸರೇರಾ, ಲಕ್ಷ್ಮಿ ಸರೇರಾ, ಉಷಾ ಸರೇರಾ, ಪೂಲ್‌ಸರೇರಾ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಕೋಳಿ ಫಾರಂ ಮಾಲೀಕ ಕರೆ ಮಾಡಿದಾಗ ಕರೆ ಸ್ವೀಕರಿಸದೆ ಇದ್ದು, ಇದರಿಂದ ಅನುಮಾನಗೊಂಡು ಪಕ್ಕದ ಊರಿನ ಕೋಳಿ ಫಾರಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೃತ ಸಂಬಂಧಿಕರಿಗೆ ಕರೆ ಮಾಡಿದ್ದಾರೆ.
ಅವರು ಶೆಡ್ ಕಿಟಕಿ ಬಳಿ ನೋಡಿದಾಗ, ಮಲಗಿದ್ದವರು, ಮಲಗಿದ್ದಂತೆಯೇ ಸಾವನಪ್ಪಿರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸೊಳ್ಳೆ ಕಾಟಕ್ಕಾಗಿ ಹಾಕಿದ್ದ ಹೊಗೆಯಿಂದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…