ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ, ಮನೆಯಲ್ಲೇ ತಂದೆ ಮಗ ಸಾವನ್ನಪ್ಪಿದ್ದು, ತಾಯಿ ಮತ್ತೊಬ್ಬ ಮಗ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ…
ಕುಮಾರಪ್ಪ ನೇಣಿಗೆ ಶರಣು, ಉಳಿದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಮನೆಯಲ್ಲೇ ಕುಮಾರಪ್ಪ(60) ಮತ್ತು ಆತನ ಮಗ ಅರುಣ್(30) ಸಾವನ್ನಪ್ಪಿದ್ದಾರೆ
ಮೃತ ಕುಮಾರಪ್ಪನ ಹೆಂಡತಿ ರಮಾ(55) ಮತ್ತು ಮಗ ಅಕ್ಷಯ್ (25) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಮಾ ವಿಷ ಸೇವಿಸಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಅಕ್ಷಯ್ ಹೆಬ್ಬಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.
ಮೃತ ದುರ್ದೈವಿಗಳ ಬಳಿ ಮದ್ಯದ ಬಾಟಲಿ ಮತ್ತು ವಿಷದ ಬಾಟಲಿ ಪತ್ತೆಯಾಗಿದೆ. ಮೃತ ದೇಹಗಳನ್ನ ನೋಡಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…