ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ: ಪತ್ನಿ, ಇಬ್ಬರು ಹೆಣ್ಣು ಮಕ್ಕಳಿಗೆ ವಿಷ ಕೊಟ್ಟು ನೇಣಿಗೆ ಶರಣಾದ ಪತಿ

ಮನೆಯಲ್ಲಿ ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ ಪಿ ರವಿ.ಪಿ, ರಾಜಾನುಕುಂಟೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪತಿ ಅವಿನಾಶ್ (38), ಪತ್ನಿ ಮಮತಾ (30) ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.

ಅವಿನಾಶ್ ಮೊದಲಿಗೆ ಮಕ್ಕಳು, ಪತ್ನಿಗೆ ವಿಷ ಕೊಟ್ಟು ಸಾಯಿಸಿ, ಆ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮೃತರು ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಯಡಿಯೂರಪ್ಪ ನಗರದಲ್ಲಿನ ನರಸಪ್ಪ ಎಂಬುವವರ ಮನೆಯಲ್ಲಿ 5 ವರ್ಷದಿಂದ ಬಾಡಿಗೆಗೆ ಇದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅವಿನಾಶ್ ಸಹೋದರ ಉದಯ್ ಎಂಬಾತನು ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು  ನೀಡಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

10 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

13 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

15 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

16 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

17 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

21 hours ago