Categories: ಮೈಸೂರು

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಣ್ಣ, ನಾಗರತ್ನ ಹಾಗೂ ಅವರ ಪುತ್ರಿ ರಕ್ಷಿತಾ ಮೃತ ದುರ್ದೈವಿಗಳಾಗಿದ್ದಾರೆ.

ಕುಟುಂಬದವರು ಡೆತ್ ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತನ ಕಿರುಕುಳ ಹಾಗೂ ಮಾನಸಿಕ ಹಿಂಸೆಯಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಿತಾಗೆ ಮದುವೆ ನಿಶ್ಚಯವಾಗಿದ್ದು, ಆಕೆಯ ಕೆಲವು ಫೋಟೋಗಳು ಮತ್ತು ಮೆಸೇಜ್‌ಗಳನ್ನು ಇಟ್ಟುಕೊಂಡು ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಆ ಮಾಹಿತಿ ಕಳುಹಿಸಲಾಗಿತ್ತು ಎನ್ನಲಾಗಿದೆ.

ಈ ಬೆಳವಣಿಗೆಯಿಂದ ಮನನೊಂದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವರುಣಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

8 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

13 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

16 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago