ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ 20ಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವು: ಸರಣಿ ಸಾವುಗಳಿಗೆ ನಿಖರ ಕಾರಣ ಪತ್ತೆಹಚ್ಚಲು ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದರು.

ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ. ಆತುರಾತುರದಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು, ಕಾರಣ ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೊವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ ಎಂದು ತಿಳಿಸಿದರು.

ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು ಎಂದರು.

ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

8 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

21 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago