ಹೊಸಕೋಟೆ: ಒಂದೇ ದಿನ ನಾಲ್ಕು ದೇವಾಲಯಗಳಲ್ಲಿ ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಪಟಾಲಮ್ಮ, ಮುತ್ಯಾಲಮ್ಮ, ಗಂಗಮ್ಮ ಮತ್ತು ಓಂ ಶಕ್ತಿ ದೇವಾಲಯದಲ್ಲಿ ಕಳ್ಳತನವಾಗಿದೆ. ಕಳ್ಳರ ಕೈಚಳಕಕ್ಕೆ ಗ್ರಾಮಸ್ಥರು ಶಾಕ್ ಆಗಿದ್ದಾರೆ.
ಕಳ್ಳರು 11 ರುಪಾಯಿ ದಕ್ಷಿಣೆ ಇಟ್ಟು ದೇವಾಲಯದಲ್ಲಿ ಕಳ್ಳತನ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ದೇವರ ಕೊರಳಲ್ಲಿದ್ದ 6 ತಾಳಿ ಕಳ್ಳತನ ಮಾಡಲಾಗಿದೆ. ಲಕ್ಷಾಂತರ ರುಪಾಯಿ ಬೆಲೆ ಬಾಳುವ ಚಿನ್ನವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.