ಹೊಸಕೋಟೆ: ಒಂದೇ ದಿನ ನಾಲ್ಕು ದೇವಾಲಯಗಳಲ್ಲಿ ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಪಟಾಲಮ್ಮ, ಮುತ್ಯಾಲಮ್ಮ, ಗಂಗಮ್ಮ ಮತ್ತು ಓಂ ಶಕ್ತಿ ದೇವಾಲಯದಲ್ಲಿ ಕಳ್ಳತನವಾಗಿದೆ. ಕಳ್ಳರ ಕೈಚಳಕಕ್ಕೆ ಗ್ರಾಮಸ್ಥರು ಶಾಕ್ ಆಗಿದ್ದಾರೆ.
ಕಳ್ಳರು 11 ರುಪಾಯಿ ದಕ್ಷಿಣೆ ಇಟ್ಟು ದೇವಾಲಯದಲ್ಲಿ ಕಳ್ಳತನ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ದೇವರ ಕೊರಳಲ್ಲಿದ್ದ 6 ತಾಳಿ ಕಳ್ಳತನ ಮಾಡಲಾಗಿದೆ. ಲಕ್ಷಾಂತರ ರುಪಾಯಿ ಬೆಲೆ ಬಾಳುವ ಚಿನ್ನವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ಡಿ.ಕ್ರಾಸ್ ವೃತ್ತದಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವ ಘಟನೆ…
ದೊಡ್ಡಬಳ್ಳಾಪುರ: ಕರ್ತವ್ಯ ನಿರತ ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೊಲೀಸ್ ಸಮವಸ್ತ್ರಕ್ಕೆ ಕೈಹಾಕಿ ತಳ್ಳಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ದೊಡ್ಡಬಳ್ಳಾಪುರ: ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ನಡು ರಸ್ತೆಯಲ್ಲೇ ಸಮವಸ್ತ್ರ ಹರಿದು ದರ್ಪ ಮೆರೆದಿರುವ…
ದೊಡ್ಡಬಳ್ಳಾಪುರ: ಮುಂದಿನ ಐದು ವರ್ಷಗಳ ಅವಧಿಗೆ ನಡೆಯಲಿರುವ ತಾಲ್ಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯ…
ದೊಡ್ಡಬಳ್ಳಾಪುರ: ಮುಂಬರುವ ಐದು ವರ್ಷಗಳ ಅವಧಿಗೆ ನಡೆಯಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 28…
ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ. ಕರ್ನಾಟಕದ ಜನರನ್ನು ದಿಕ್ಕುತಪ್ಪಿಸುವ ರಾಜಕೀಯವನ್ನು ನಿಲ್ಲಿಸಲಿ ಎಂದು…