Categories: ತುಮಕೂರು

ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ

ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಏಳು ಮಂದಿ ಮಹಿಳೆಯರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು.

ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಶಸ್ತ್ರಚಿಕಿತ್ಸೆಗೆ ಮೂವರು ಮಹಿಳೆಯರು ಒಳಗಾಗಿದ್ದರು.

ಫೆ.22ರಂದು 7 ಮಂದಿ ಮಹಿಳೆಯರಿಗೆ ಹೆರಿಗೆ ಸೇರಿದಂತೆ ವಿವಿಧ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

30 ವರ್ಷದ ಅನಿತಾ ಅವರು ಸಂತಾನಹರಣ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದಾರೆ. ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ‌ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು.‌ ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆ.24ರಂದು ಸಾವನ್ನಪ್ಪಿದ್ದಾರೆ.

ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ನರಸಮ್ಮ‌ ಸ್ಥಿತಿ ಗಂಭೀರವಾಗಿತ್ತು. ನರಸಮ್ಮ ಅವರನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆ.25ರಂದು ನರಸಮ್ಮ ಅಸುನೀಗಿದ್ದಾರೆ.

ಈ ಮೂವರು ಫೆ.22ರಂದು ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಮೂವರು ಸಾವಿಗೆ ನ್ಯಾಯ ಒದಗಿಸುವಂತೆ ಅಂಜಲಿ ಕುಟುಂಬಸ್ಥರಿಂದ ಪಾವಗಡದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago