ಒಂದೇ ಭೂಮಿಯ ದಾಖಲೆ ನಕಲು: ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಖದೀಮರು: ಸದ್ಯ 6 ಆರೋಪಿಗಳ ಬಂಧನ

ಒಂದೇ ಭೂಮಿಯ ದಾಖಲೆಯನ್ನು ನಕಲು ಮಾಡಿ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದ ಪ್ರಕರಣದಲ್ಲಿ ಆರು ಜನರನ್ನು ಜಯನಗರ ಪೊಲೀಸರು ಬಂಧಿಸಲಾಗಿದೆ. ಹೆಚ್ಚುವರಿ ತನಿಖೆಯಿಂದಾಗಿ ಈ ಬಂಧಿತರು 22 ಬ್ಯಾಂಕುಗಳಿಂಗ 10 ಕೋಟಿಯ ಕಂತು ಸಾಲ ಮತ್ತು ಯಂತ್ರೋಪಕರಣ ಸಾಲ ಪಡೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ನಗರ‌ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

ಜಯನಗರ ಪೊಲೀಸರು ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಳೆಯ ತಾಮ್ರದ ಪಾತ್ರೆ ಹಾಗೂ 69,79,000 ಲಕ್ಷ ನಗದು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದರು.

ಹಲವು ಅಪರಾಧಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಐವರು ರೌಡಿಗಳನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

ಸಿದ್ದಾಪುರ ಪೊಲೀಸರು ಕಳೆದ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನನ್ನು 2011ರಲ್ಲಿ ನ್ಯಾಯಾಲಯ ಹೊರಡಿಸಿದ್ದ ವಾರೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಹೆಚ್ಚಿನ ತನಿಖೆಯಿಂದಾಗಿ ಬಂಧಿತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 16 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿರುತ್ತದೆ ಎಂದರು.

ಸರಗಳ್ಳತನ ಹಾಗೂ ಕಳ್ಳತನ ಪ್ರಕರಣಗಳನ್ನು ನಿಗ್ರಹಿಸುವಲ್ಲಿ ಪುಟ್ಟೇನಹಳ್ಳಿ ಪೊಲೀಸರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮಾ.19ರಂದು ಬಾಗಲಗುಂಟೆ ಹಾಗೂ ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಬಳಿಯಿಂದ 1.80 ಲಕ್ಷ ಮೌಲ್ಯದ ಕಳುವಾದ  ವಸ್ತುಗಳು ಸಿಕ್ಕಿವೆ ಎಂದು ತಿಳಿಸಿದರು.

ಏ.14ರಂದು ಪುಟ್ಟೇನಹಳ್ಳಿಯಲ್ಲಿ ನಡೆದ ಮತ್ತೊಂದು ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದು, ಇವರಿಂದ 2 ಚಿನ್ನದ ಸರ, ಒಂದು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಸೇರಿ ಒಟ್ಟು 4.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏ.01ರಂದು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನ ಬಂಧನವಾಗಿದ್ದು, ಈತನಿಂದ 4.75 ಲಕ್ಷ ಮೌಲ್ಯದ 17 ಗ್ರಾಂ ಚಿನ್ನದ ಬಿಸ್ಕೆಟ್, 54 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

2 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

3 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

4 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

6 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

9 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

11 hours ago