ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕು ಕಚೇರಿ ಹಿಂಭಾಗದಲ್ಲಿರುವ ಕಛೇರಿಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಾಗೂ ಬಿಎಸ್‌ಎನ್‌ಎಲ್ ಕಚೇರಿ ಹಿಂಭಾಗದ ದರ್ಗಾ ಮುಂದೆ ಇರುವ ಸ್ಮಶಾನದಲ್ಲಿ ಇದ್ದ ತಲಾ ಒಂದೊಂದು ಶ್ರೀಗಂಧದ ಮರವನ್ನು ದುಷ್ಕರ್ಮಿಗಳು ಕತ್ತರಿಸಿ ಕಳವು ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಜೂನ್ 13ರ ರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಜೂನ್ 14ರಂದು ಭಾನುವಾರ ರಜೆ ಇದ್ದ ಕಾರಣ ಘಟನೆ ತಕ್ಷಣ ಬೆಳಕಿಗೆ ಬಂದಿರಲಿಲ್ಲ. ಸೋಮವಾರ ಬೆಳಗ್ಗೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ ವೇಳೆ ಮರಗಳ ಕಳವು ನಡೆದಿರುವುದು ಗೊತ್ತಾಗಿದೆ.

ಘಟನೆ ಕುರಿತು ಸಂಬಂಧಪಟ್ಟವರು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡು ಸ್ಥಳಗಳಲ್ಲೂ ಮರಗಳನ್ನು ವೃತ್ತಿಪರ ರೀತಿಯಲ್ಲಿ ಕತ್ತರಿಸಿ ಸಾಗಿಸಿರುವ ಶಂಕೆ ವ್ಯಕ್ತವಾಗಿದ್ದು, ಮರಗಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕಳುವಾದ ಶ್ರೀಗಂಧದ ಮರಗಳ ಮೌಲ್ಯ ಹಾಗೂ ಕೃತ್ಯದಲ್ಲಿ ಭಾಗಿಯಾಗಿರುವವರ ಕುರಿತು ತನಿಖೆ ಮುಂದುವರಿದಿದೆ.

ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

11 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

21 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

22 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago