Categories: ರಾಜ್ಯ

ಒಂದೇ ವಾರದಲ್ಲಿ ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಕೆ: 20 ಟಿಎಂಸಿ ನೀರು ಉಳಿಸಿದ ತಜ್ಞರು: ರೈತರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ- ಸಿಎಂ ಸಿದ್ದರಾಮಯ್ಯ

ಒಂದೇ ವಾರದಲ್ಲಿ ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದಗಳು. ಎರಡನೇ ಬೆಳೆಗೂ ನೀರು ಸಿಗತ್ತದೆ, ಈ ಭಾಗದ ರೈತರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎರಡನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು.

ಗೇಟ್ ಮುರಿದಾಗ ನಮ್ಮ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು ಮತ್ತು ನಾನು ಚರ್ಚಿಸಿ ತುರ್ತಿನ ಕ್ರಮಕ್ಕೆ ಮುಂದಾದೆವು. ನಮ್ಮ ಸೂಚನೆಯಂತೆ ಒಂದೇ ವಾರದಲ್ಲಿ ಗೇಟ್ ಅಳವಡಿಸಿ 20 ಟಿಎಂಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯ ನಾಯ್ಡು ಮತ್ತು ಎಂಜಿನಿಯರ್ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದರು.

ಎಡ ಮತ್ತು ಬಲ ದಂಡೆ ಕಾಲುವೆ ಸೇರಿ ರಾಜ್ಯದ 9,26,438 ಎಕರೆ ಕೃಷಿಭೂಮಿಗೆ, ಆಂದ್ರಪ್ರದೇಶದ 6,25,097 ಎಕರೆ, ತೆಲಂಗಾಣದ 87,000 ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ತುಂಗಭದ್ರಾ ಅಣೆಕಟ್ಟು ಎರಡನೇ ಬಾರಿ ತುಂಬಿರುವುದ ಅತ್ಯಂತ ಸಂತಸದ ವಿಚಾರ ಎಂದು ಹೇಳಿದರು.

ವಿರೋಧ ಪಕ್ಷದ ಮಾತುಗಳಿಗೆ ಕಿವಿಕೊಡಬೇಡಿ. ಮೊದಲು ದಿನಕ್ಕೊಂದು ಸುಳ್ಳು ಹೇಳುತ್ತಿದ್ದ ಬಿಜೆಪಿ ಈಗ ಗಳಿಗೆಗೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ. ಬಿಜೆಪಿ ನಿಮ್ಮನ್ನು ಯಾಮಾರಿಸಿ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎನ್ನುವ ನಂಬಿಕೆ ನನಗಿದೆ. ಏಕೆಂದರೆ ಕೊಪ್ಪಳ, ಬಳ್ಳಾರಿ, ವಿಜಯನಗರದ ಜನತೆ ಏನು ಅಂತ ನನ್ನ ಹೃದಯಕ್ಕೆ ಚನ್ನಾಗಿ ಗೊತ್ತು. ಬಿಜೆಪಿ ಮಾತನ್ನು ನಂಬಬೇಡಿ. ಎರಡೂ ಬೆಳೆಗೂ ನೀರು ಕೊಡುತ್ತೇವೆ ಎಂದು ತಿಳಿಸಿದರು.

ಅಣೆಕಟ್ಟೆಯ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13 ರಂದು ಇಲ್ಲಿಗೆ ಆಗಮಿಸಿದ್ದೆ. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ‌ ಅರ್ಪಿಸುತ್ತೇನೆ ಎಂದು ಆಗ ಹೇಳಿದ್ದೆ. ಕೊಟ್ಟ ಮಾತಿನಂತೆ ಇಂದು ಬಾಗಿನ ಅರ್ಪಿಸಿದ್ದೇನೆ ಎಂದರು.

ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆ ಕೊಟ್ಟಿದ್ದೀರಿ. ನಾವು ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ 46 ವಿಷಯಗಳನ್ನು, ಅನೇಕ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕದ ಅಭಿವಧ್ಧಿಗಾಗಿ ಘೋಷಿಸಿದ್ದೇವೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ 371ಜೆ ಜಾರಿ ಮಾಡಲು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರ ವಿರೋಧಿಸಿತ್ತು. ಆದರೆ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ 371 ಜೆ ಜಾರಿ ಮಾಡಿದರು ಎಂದು ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಗೋವಿಂದರಾವ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ. ಈಗಾಗಲೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ₹5,000 ಕೋಟಿ ಘೋಷಿಸಿ ಆಗಿದೆ. ಕೇಂದ್ರ ಸರ್ಕಾರ ಕೂಡ ₹5,000 ಕೋಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಕೇಂದ್ರ ಕೊಡುತ್ತದೋ ಇಲ್ಲವೋ ನೀವೇ ನೋಡುತ್ತೀರಿ ಎಂದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

4 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

6 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

9 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

10 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

13 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 hours ago