Categories: ಕೋಲಾರ

ಒಕ್ಕಲಿಗರು ರಾಜಕಾರಣಕ್ಕೆ ಸೀಮಿತವಾಗದೆ ಉದ್ಯಮಕ್ಕೆ ಆದ್ಯತೆ ನೀಡಿ- ಶ್ರೀ ಮಂಗಳಾನಂದನಾಥ ಸ್ವಾಮೀಜಿ ಕರೆ

ಕೋಲಾರ: ಜಿಲ್ಲೆಯ ಒಕ್ಕಲಿಗರು ಅರಿವಿನ ಮತ್ತು ಆರ್ಥಿಕ ಪರಿಸ್ಥಿತಿಯ ಕೊರತೆಯಿಂದಾಗಿ ಉದ್ಯಮ ಕ್ಷೇತ್ರದಿಂದ ಹಿಂದಿದ್ದಾರೆ ಕೇವಲ ಕೃಷಿಗೆ ಸೀಮಿತವಾಗದೆ ಉದ್ಯಮ ಕ್ಷೇತ್ರವನ್ನೂ ಆಯ್ಕೆ ಮಾಡಿಕೊಂಡು ಬೇರೆಯವರಿಗೂ ಉದ್ಯೋಗ ನೀಡುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಶಾಖಾಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ತಿಳಿಸಿದರು.

ನಗರದ ಹೊರವಲಯದ ಒಲಿವಿಯಾ ರೆಸಾರ್ಟ್ ನಲ್ಲಿ ಭಾನುವಾರ ಉದ್ಯಮಿ ಒಕ್ಕಲಿಗ ಫಸ್ಟ್ ಸರ್ಕಲ್ ಸೊಸೈಟಿಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗಹಿಸಿ ಮಾತನಾಡಿದ ಅವರು ಕೋಲಾರ ಜಿಲ್ಲೆಯ ಜನ ಶ್ರಮಜೀವಿಗಳು ಕೇವಲ ರೈತ ಉದ್ಯಮಿಗಳಾದರೆ ಸಾಲದು ಬದಲಾವಣೆಗೆ ತಕ್ಕಂತೆ ನಾವು ಬದಲಾಗಿ ಸ್ಪರ್ಧೆ ಎದುರಿಸಲು ಸನ್ನದ್ದರಾಗಬೇಕು. ವಿವಿಧ ಕ್ಷೇತ್ರಗಳಲ್ಲಿ ಉದ್ಯಮ ಮಾಡಿ ಬೇರೆ ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಿ ಮುಂದಿನ ಪೀಳಿಗೆಗೆ ಸಹಕಾರಿಯಾಗುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಜಲಸಾರಿಗೆ ಮಂಡಳಿಯ ಸಿಇಒ ಜಯರಾಮ್ ರಾಯಪುರ, ಗಂಗರ ಅರಸರ ಕಾಲದಿಂದಲೂ ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯವನ್ನು ಕಟ್ಟಿ ಆಳಿದ್ದಾರೆ ನಾವುಗಳು ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು. ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ ಉದ್ಯೋಗ ನೀಡುವ ಉದ್ಯಮಿಯಾಗಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಒಕ್ಕಲಿಗರು ರಾಜಕೀಯದಲ್ಲಿ ಬಲಿಷ್ಠವಾಗಿದ್ದಾರೆ ಆದರೆ ಉದ್ಯಮ ಕ್ಷೇತ್ರದಲ್ಲಿ ಹಿಂದೆ ಇದ್ದಾರೆ ಸಮುದಾಯವು ಕಡಿಮೆ ಇರುವ ದಕ್ಷಿಣ ಕನ್ನಡ ಜಿಲ್ಲೆಗೆ ಹೋಲಿಕೆ ಮಾಡಿದರೆ ಇಲ್ಲಿ ಕೇವಲ 1% ಅಷ್ಟೇ ಉದ್ಯಮದಲ್ಲಿ ಇದ್ದಾರೆ ಇದರಲ್ಲಿ ರಾಜಕಾರಣಿಗಳ ಹೊಣೆಗಾರಿಕೆ ಹೆಚ್ಚಾಗಬೇಕು ಸಮುದಾಯದಲ್ಲಿ ಪರಸ್ಪರ ಒಗ್ಗಟ್ಟಿನಿಂದ ಅರಿವು ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಕೈಜೋಡಿಸಿ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಜಿಲ್ಲೆಯ ಜನ ಕೃಷಿಯ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ್ದಾರೆ ಆದರೆ ಉದ್ಯಮದಲ್ಲಿ ಅರಿವಿನ ಕೊರತೆಯಿಂದ ಕೈಗಾರಿಕೆಗಳು ಮಾಡಿ ಕೈ ಸುಟ್ಟುಕೊಂಡಿದ್ದಾರೆ ಯುವಕರಿಗೆ ಮಾರ್ಗದರ್ಶನ ನೀಡಿದರೆ ಭವಿಷ್ಯದ ಉದ್ಯಮಗಳಾಗಲಿದ್ದು ಬೇರೆಯವರಿಗೂ ಉದ್ಯೋಗ ನೀಡುವಂತಾಗುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಫಸ್ಟ್ ಸರ್ಕಲ್ ಸೊಸೈಟಿ ಜಿಲ್ಲಾ ಗೌರವ ಅಧ್ಯಕ್ಷ ಸಿಎಂಆರ್ ಶ್ರೀನಾಥ್ ಮಾತನಾಡಿ ಮನುಷ್ಯನ ಜೀವನಕ್ಕೆ ಉದ್ಯೋಗ ಮುಖ್ಯವಾಗಿದೆ ಒಕ್ಕಲಿಗರ ಉಪ ಜಾತಿಗಳಿಂದ ಸಮುದಾಯಕ್ಕೆ ಮಾರಕವಾಗಿದೆ ನಮ್ಮಲ್ಲಿಯೇ ಒಗ್ಗಟ್ಟಿ ಇಲ್ಲ ಉಪಜಾತಿಗಳ ಮನಸ್ಥಿತಿಯಿಂದ ಹೊರಬಂದು ನಾವು ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಉದ್ಯಮ ಮಾಡಿ ಬೇರೆಯವರನ್ನು ಬೆಳೆಸುವ ಗುಣ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಎಂಎಲ್ಸಿ ಇಂಚರ ಗೋವಿಂದರಾಜು, ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಕೆ.ವಿ ಶಂಕರಪ್ಪ, ಐಎಎಸ್ ಅಧಿಕಾರಿ ಕೆ.ಆರ್.ನಂದಿನಿ, ದೆಹಲಿ ಕನ್ನಡ ಸಂಘದ ಅಧ್ಯಕ್ಷ ನಾಗರಾಜ್, ನೀರಾವರಿ ಹೋರಾಟಗಾರ ಆಂಜನೇಯರೆಡ್ಡಿ, ಉದ್ಯಮಿ ಡೆಕ್ಕನ್ ರಾಮಕೃಷ್ಣಪ್ಪ, ವೈದ್ಯ ಕೃಷ್ಣಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

9 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

10 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

10 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

13 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

16 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

18 hours ago