ಕರ್ನಾಟಕ ರಾಜ್ಯದಲ್ಲಿ ಕನ್ನಡ ಚುನಾವಣೆಯ ವಿಷಯ ಆಗಬೇಕಾಗಿದೆ. ಒಕ್ಕೂಟ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಒಕ್ಕೂಟ ವ್ಯವಸ್ಥೆಯ ಸರ್ಕಾರದಲ್ಲಿ ಹಿಂದಿ ಭಾಷೆಯ ರಾಜ್ಯಗಳಿಗೆ ಸಿಗುತ್ತಿರುವ ಮನ್ನಣೆ ದಕ್ಷಿಣ ಭಾರತದ ರಾಜ್ಯಗಳಿಗೆ ಸಿಗುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ. ನಮ್ಮ ರಾಜ್ಯದಲ್ಲಿರುವ ಬ್ಯಾಂಕ್, ಅಂಚೆ, ರೈಲ್ವೆ ಮುಂತಾದ ಕಡೆಗಳಲ್ಲಿ ಕನ್ನಡ ಭಾಷೆಗೆ ಸೂಕ್ತ ಮನ್ನಣೆ ಇಲ್ಲದಾಗಿದೆ. ಒಕ್ಕೂಟ ವ್ಯವಸ್ಥೆ ಸರ್ಕಾರದಲ್ಲಿ ಕರ್ನಾಟಕದ ಜನಪ್ರತಿನಿಧಿಗಳು ಕನ್ನಡದ ಹಿತವನ್ನು ಕಾಪಾಡುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ ಎಂದರು.
ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಗ್ರ ಸ್ಥಾನ ಇರಲೇಬೇಕು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂಬುದನ್ನು ಎಲ್ಲಾ ಕನ್ನಡಿಗರು ಅರಿಯಬೇಕಾಗಿದೆ. ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವುದು ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಆಯುಕ್ತ ವೆಂಕಟರಾಜು, ಭಾರತ ಸೇವಾದಳ ಕಾರ್ಯದರ್ಶಿ ಜ್ಯೋತಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜುಶಿರವಾರ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಾಪ ಪದಾಧಿಕಾರಿಗಳಾದ ಆರ್.ಗೋವಿಂದರಾಜು, ಜಿ.ಎಂ.ನಾಗರಾಜ್, ಜಿ.ಸುರೇಶ್, ಮುನಿರಾಜು, ಸಫೀರ್, ನಾಗರತ್ನಮ್ಮ, ಚಿದಾನಂದ್, ಕನ್ನಡಪರ ಸಂಘಟನೆಗಳ ಮುಖಂಡರುಗಳಾದ ನಾಗರಾಜು, ಅಗ್ನಿವೆಂಕಟೇಶ್, ಕಾರ್ಮಿಕ ಮುಖಂಡ ಪಿ.ಎ.ವೆಂಕಟೇಶ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ತೀರ್ಥಲಿಂಗಪ್ಪ, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಸನ್ಮಾನ :-
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ.ಶ್ರೀಕಾಂತ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರರಾದ ನಂ.ಮಹಾದೇವ ಮತ್ತು ಜಿ.ಸುರೇಶ್ ಅವರುಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನ ನಡೆಯಿತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…