ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಎರಡಲ್ಲ.. ಬದಲಿಗೆ ಮೂರು ರೈಲುಗಳು ಡಿಕ್ಕಿಯಾಗಿವೆ ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 233ಕ್ಕೆ ಏರಿದೆ. 900ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್ ಹಾಗೂ ಒಂದು ಗೂಡ್ಸ್ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ಡಿಕ್ಕಿಯಾಗಿವೆ.
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ : ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ
ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರೈಲು ದುರಂತ ಹಿನ್ನೆಲೆ ಒಡಿಶಾದಲ್ಲಿಂದು ಶೋಕದಿನಾಚರಣೆ ಮಾಡಲು ತೀರ್ಮಾನಿಸಿದ ಸರ್ಕಾರ
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…