ಒಡಿಶಾದಲ್ಲಿ 3 ರೈಲುಗಳ ಮಧ್ಯೆ ಭೀಕರ ಅಪಘಾತ; 233ಕ್ಕೇರಿದ ಸಾವಿನ ಸಂಖ್ಯೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಎರಡಲ್ಲ.. ಬದಲಿಗೆ ಮೂರು ರೈಲುಗಳು ಡಿಕ್ಕಿಯಾಗಿವೆ ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 233ಕ್ಕೆ ಏರಿದೆ. 900ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್‌ ಹಾಗೂ ಒಂದು ಗೂಡ್ಸ್‌ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿವೆ.

ಇದೂವರೆಗೂ 200 ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಒಡಿಶಾ ಅಗ್ನಿಶಾಮಕ ಸೇವೆಗಳ ಡಿಜಿ ಸುಧಾಂಶು ಸಾರಂಗಿ ತಡರಾತ್ರಿ ಮಾಹಿತಿ ನೀಡಿದ್ದಾರೆ.

ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ : ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರೈಲು ದುರಂತ ಹಿನ್ನೆಲೆ ಒಡಿಶಾದಲ್ಲಿಂದು ಶೋಕದಿನಾಚರಣೆ ಮಾಡಲು ತೀರ್ಮಾನಿಸಿದ‌ ಸರ್ಕಾರ

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 minutes ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

5 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

7 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

10 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

22 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago