ಒಡ್ಡರಹಳ್ಳಿ (ORH) ರೈಲು ನಿಲ್ದಾಣಕ್ಕೆ “ಘಾಟಿ ಸುಬ್ರಹ್ಮಣ್ಯ ರೈಲು ನಿಲ್ದಾಣ”ವೆಂದು ಹೆಸರಿಡಲು ಮನವಿ

ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ.

ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಇಂತಹ ಪ್ರಸಿದ್ಧ ಕ್ಷೇತ್ರದ ಹತ್ತಿರವೇ ಇದ್ದರೂ, “ಒಡ್ಡರಹಳ್ಳಿ” ಎಂಬ ಹೆಸರಿನ ಕಾರಣದಿಂದ ರೈಲು ಪ್ರಯಾಣಿಕರಲ್ಲಿ ಇದರ ಅರಿವು ಕಡಿಮೆ ಇದ್ದು, ಹೆಚ್ಚಿನ ಭಕ್ತರು ರಸ್ತೆ ಮಾರ್ಗವನ್ನೇ ಆಯ್ಕೆ ಮಾಡುತ್ತಿದ್ದಾರೆ.

ಮನವಿ ಪತ್ರದ ಮುಖ್ಯಾಂಶಗಳು ಹೀಗಿವೆ:

ಒಡ್ಡರಹಳ್ಳಿ (ORH) ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ” ಎಂದು ಮರುಹೆಸರಿಸುವಂತೆ ಆಗ್ರಹ.

ನಿಲ್ದಾಣದ ಮೂಲಕ ಹಾದುಹೋಗುವ ಪ್ರಮುಖ ಎಕ್ಸ್‌ಪ್ರೆಸ್ ಹಾಗೂ ಪ್ಯಾಸೆಂಜರ್ ರೈಲುಗಳಿಗೆ ವಿಶೇಷ ನಿಲ್ದಾಣ ವ್ಯವಸ್ಥೆ ಕಲ್ಪಿಸುವಂತೆ ವಿನಂತಿ.

ರಸ್ತೆ ಸಾರಿಗೆ ಸಾಕಷ್ಟು ಅಸಮರ್ಪಕವಾಗಿದ್ದು, ವಿಶೇಷ ದಿನಗಳಲ್ಲಿ ಭಾರೀ ಸಂಚಾರ ಜಾಮಾಗಳಾಗುತ್ತಿರುವುದು.

ಈ ಹೆಸರಿನ ಬದಲಾವಣೆ ಮತ್ತು ನಿಲ್ದಾಣ ಸೌಲಭ್ಯ ಹೆಚ್ಚಿದರೆ, ಭಕ್ತರಿಗೆ ಅನುಕೂಲವಾಗುವುದು ಮಾತ್ರವಲ್ಲ, ಸ್ಥಳೀಯ ಆರ್ಥಿಕತೆಗೂ ಉತ್ತೇಜನ ದೊರಕುವುದು.

ಈ ಕುರಿತು ಸಂಸದರು ರೈಲ್ವೆ ಇಲಾಖೆಗೆ ಶಿಫಾರಸು ಮಾಡಿದರೆ, ಈ ಜನಪರ ಬೇಡಿಕೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಬಹಳ ಹೆಚ್ಚು, ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮತ್ತು ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ತಿಳಿಸಿದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

6 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

7 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

7 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

7 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

11 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

14 hours ago