ಹಲವಾರು ಸಮಾಜಿಕ ಕಾರ್ಯಕ್ರಮಗಳ ಜೊತೆಗೆ ಒಂದು ಸಮುದಾಯಕ್ಕೆ ಸೀಮಿತವಾಗದೇ ಎಲ್ಲರನ್ನು ಒಗ್ಗೂಡಿಸಿ ಸಮುದಾಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ತಾಲೂಕಿನ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಅವರನ್ನು ಕೆಪಿಸಿಸಿ ಸದಸ್ಯ ಮುನಿರಾಜು ಶ್ಲಾಘಿಸಿದರು.
ನಗರದಲ್ಲಿನ ಭೋವಿ ಸಂಘದ ಕಚೇರಿಯಲ್ಲಿ ನಡೆದ ರಾಮಕೃಷ್ಣ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕಿನ ಎಲ್ಲಾ ಹಳ್ಳಿಗಳು ಭೋವಿ ಸಮುದಾಯದವರನ್ನು ಒಗ್ಗೂಡಿಸಿ ಆರ್ಥಿಕ, ಸಮಾಜಿಕ, ರಾಜಕೀಯ ಸೇರಿದಂತೆ ಎಲ್ಲಾ ವಲಯಗಳಲ್ಲಿ ಸದೃಢರಾಗುವಂತೆ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಭೋವಿ ಸಂಘದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ ಸಮುದಾಯದ ಮುಖಂಡರು, ಸ್ನೇಹಿತರು, ಹಿತೈಷಿಗಳಿಗೆ ಧನ್ಯವಾದ ತಿಳಿಸುತ್ತಾ, ಸಮಾಜವನ್ನು ಉತ್ತಮ ರೀತಿಯಲ್ಲಿ ಕಟ್ಟುವಲ್ಲಿ ಶ್ರಮವಹಿಸುವೆ, ನನ್ನ ಎಲ್ಲಾ ಸಮಾಜಿಕ ಕಳಕಳಿಯ ಸೇವೆಗಳನ್ನು ಮುಂದುವರಿಸುತ್ತೇನೆ. ಸರ್ಕಾರವು ಒಳಮೀಸಲಾತಿಯನ್ನು ತಂದರೆ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಆದ್ದರಿಂದ ನಾವು ಒಳಮೀಸಲಾತಿಯನ್ನು ವಿರೋಧಿಸುತ್ತೇವೆ ಎಂದರು.
ಈ ವೇಳೆ ಭೋವಿ ಸಂಘದ ಹಿರಿಯ ಮಾಕಳಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…