ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು, ಇದು ಸ್ವಾಗತಾರ್ಹ, ಸುಮಾರು 40 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ. ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ. ಈ ಪ್ರಕ್ರಿಯೆಯಲ್ಲಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಕಾನೂನು ಸಚಿವ ಎಚ್ ಕೆ ಪಾಟೀಲ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೆ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಕೃತಜ್ಞತೆಗಳು ಎಂದು ತಿಳಿಸಿದರು.
ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ. ಅದೇರೀತಿ ಎಡಗೈ–ಬಲಗೈ ವಿವಾದಕ್ಕೂ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ ಎಂದು ತಿಳಿಸಿದರು.
ತಾಲ್ಲೂಕು ಅಧ್ಯಕ್ಷ ನಾಗರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ರಾಜಕೀಯ, ಉದ್ಯೋಗ ಹಾಗೂ ಎಲ್ಲಾ ರಂಗಗಳಲ್ಲಿ ಮೀಸಲಾತಿ ಸಿಗಬೇಕು. ಮಾದಿಗ ಸಮುದಾಯ ಶೋಷಿತರಲ್ಲಿ ಶೋಷಿತರು. ಈಗಿರುವ ಒಳ ಮೀಸಲಾತಿ ಸಾಕಾಗಲ್ಲ, ಇನ್ನೂ 3%ಹೆಚ್ಚಿಗೆ ಮಾಡಬೇಕು ಎಂದು ಒತ್ತಾಯಿಸಿದರು..
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (ಡಿಪಿಎಆರ್) ಆದೇಶ ಹೊರಡಿಸಿದೆ. ಇದು ಸ್ವಾಗತಾರ್ಹ ಎಂದರು.
ಈ ವೇಳೆ ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಉಪಾಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಬಚ್ಚಹಳ್ಳಿ ನಾಗರಾಜ್, ರಾಜ್ಯ ಸಂಘಟಕ ಬಿ.ಕೆ ಶಿವಪ್ಪ, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ಜಿಲ್ಲಾ ಸಮಿತಿ ಸದಸ್ಯರಾದ ವಿಜಯ್ ಕುಮಾರ್, ವೀರಣ್ಣ, ವೆಂಕಟೇಶಯ್ಯ, ಶಿವಣ್ಣ, ತಾಲೂಕು ಅಧ್ಯಕ್ಷ ತಳವಾರ ನಾಗರಾಜ್, ಉಪಾಧ್ಯಕ್ಷ ಟಿ.ಡಿ ಮುನಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…