ಒಳಮೀಸಲಾತಿ ವಿಚಾರ: ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕಾರಕ್ಕೆ ಒತ್ತಾಯ: ಮಾ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಸಾವಿರಾರು ಬಲಗೈ ಸಮುದಾಯದ ಬಂಧುಗಳು ಭಾಗವಹಿಸಬೇಕು ಎಂದು ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.

ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬಲಗೈ ಜಾತಿ ಸಮುದಾಯವರಿಂದ ವತಿಯಿಂದ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ಕೂಡಲೇ ತಿರಸ್ಕರಿಸಬೇಕು, ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಆದರೆ ಅವರ ಮನಸ್ಸುಗಳ ಮಧ್ಯೆ ಬೆಂಕಿ ಹಿಡುವ ಕೆಲಸವನ್ನು ಮಾಡಿದ್ದಾರೆ. ಒಳಮೀಸಲಾತಿ ಆಯೋಗದ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಆನಂದ್ ಮಾತನಾಡಿ, ರಾಜ್ಯದಲ್ಲಿ ಸುಮಾರು 30 ಲಕ್ಷ ಇದ್ದ ಬಲಗೈ ಸಮಾಜದ ಜನಸಂಖ್ಯೆಯನ್ನು 24 ಲಕ್ಷಕ್ಕೆ ತಂದಿದ್ದಾರೆ. ಒಳಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲಿಕಿದ್ದಾರೆ ಇದು ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿದೆ ಮುಂಬರುವ ಮಾರ್ಚ್ 27 ರ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.

ಎಂಪಿಸಿಎಸ್ ನಿರ್ದೇಶಕ ಹಾಗೂ ಮುಖಂಡ ಎಂ ರಾಮಾಂಜಿನಪ್ಪ ಮಾತನಾಡಿ‌, ನ್ಯಾಯಮೂರ್ತಿ ನಾಗಮೋಹನ್‌ದಾಸ್ ರವರು ಸಮೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸದೇ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಗತ್ಯ ಅಂಕಿಅಂಶಗಳನ್ನು ಕ್ರೂಢೀಕರಿಸದೇ ಒಂದು ಜಾತಿಯನ್ನು ಒಲೈಸಲು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆಯನ್ನು 04 ಭಾಗಗಳಾಗಿ ವಿಂಗಡಿಸಿ 1.38ಲಕ್ಷ ಬಲಗೈ ಸಮುದಾಯದ ಜನಸಂಖ್ಯೆಯನ್ನು ಅಲೆಮಾರಿ ಗುಂಪಿಗೆ, 2,58,915 ಜನಸಂಖ್ಯೆಯನ್ನು ಮಾದಿಗರ ಗುಂಪಿಗೆ ಸರ್ಕಾರದ ನಿಬಂಧನೆಗಳಿಗೆ ವಿರುದ್ಧವಾಗಿ 4,74,954 ಜನರನ್ನು ಆದಿಕರ್ನಾಟಕ, ಆದಿ-ದ್ರಾವಿಡ ಹಾಗೂ ಆದಿ-ಆಂಧ್ರಗಳೆಂದು ವಿಂಗಡಿಸಿ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಲು ಶಿಫಾರಸ್ಸು ಮಾಡಿರುವುದಲ್ಲದೇ ಜನರಲ್ ಮೆರಿಟ್ ನಲ್ಲಿ ನೇಮಕವಾಗಿರುವ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ನೌಕರರನ್ನು ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿರುವುದಲ್ಲದೇ ಸಾಮಾನ್ಯ ಸ್ಥಾನಗಳಲ್ಲಿ ಗೆದ್ದಿರುವ ಜನಪ್ರತಿನಿಧಿಗಳನ್ನು ಬಲಗೈ ಜನ ಪ್ರತಿನಿಧಿಗಳ ಒಟ್ಟಾರೆ ಸಂಖ್ಯೆಯಲ್ಲಿ ಪರಿಗಣಿಸಿ ದುರುದ್ದೇಶ ಪೂರಿತವಾದ ಪಕ್ಷಪಾತದಿಂದ ಕೂಡಿದ ವರದಿಯನ್ನು ಸಿದ್ದಪಡಿಸಿ ಚೆನ್ನಾಗಿ ಉಂಡವರು, ತ್ಯಾಗ ಮಾಡಬೇಕು ಎಂದು ಉದ್ದೇಶ ಪೂರ್ವಕವಾಗಿಯೇ ಬಲಗೈ ಸಮುದಾಯಕ್ಕೆ ಯಾವುದೇ ಮೀಸಲಾತಿ ಸೌಲಭ್ಯ ದೊರೆಯದಂತೆ ವರದಿ ನೀಡಿರುತ್ತಾರೆ. ಸದರಿ ವರದಿಯನ್ವಯ ರಾಜ್ಯ ಸರ್ಕಾವು ಪರಿಶಿಷ್ಟ ಜಾತಿಯ ಬಲಗೈ ಸಮುದಾಯವನ್ನು ಗ್ರೂಫ್-“ಬಿ”ಗೆ ಸೇರಿಸುವುದರ ಮೂಲಕ ಯಾವುದೇ ಉನ್ನತ ಹುದ್ದೆಗಳು ಹೊಲಯ/ಛಲವಾದಿ ಬಲಗೈ ಸಮುದಾಯಕ್ಕೆ ಸಿಗದಂತೆ ರೋಸ್ಟ‌ರ್ ಬಿಂದುಗಳನ್ನು ನಿಗದಿಪಡಿಸಿರುತ್ತದೆ ಎಂದರು.

ಈ ಸಂದರ್ಭದಲ್ಲಿ ರಮೇಶ್, ಸಂಜೀವಪ್ಪ, ಕೃಷ್ಣಪ್ಪ, ಆಂಜಿನಪ್ಪ, ರಾಜಣ್ಣ ಸೇರಿದಂತೆ ಬಲಗೈ ಸಮುದಾಯದ ಹಲವಾರು ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

52 minutes ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

5 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

8 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

19 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago