ಕೋಲಾರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊರವಲಯದ ಎನ್.ಜಿ.ಒ ಲೇಔಟ್ ನಲ್ಲಿ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ಅಯೋಧ್ಯೆಯ ಮಂತ್ರಾಕ್ಷತೆ ಹಾಗೂ ರಾಮನ ಭಾವಚಿತ್ರ ವಿತರಿಸಿ ರಾಮನ ಭಕ್ತಿಭಾವವನ್ನು ಮೆರೆದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಮಾತನಾಡಿ ಭಾರತ ದೇಶದ 500 ವರ್ಷಗಳ ಕೋಟ್ಯಂತರ ಹಿಂದೂಗಳ ಕನಸನ್ನು ಇದೇ ತಿಂಗಳು 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ಉದ್ಘಾಟನೆ ಮಾಡುವ ಮೂಲಕ ನರೇಂದ್ರ ಮೋದಿ ನಾಯಕತ್ವದಲ್ಲಿ ನನಸು ಮಾಡಲಿದ್ದಾರೆ ಇಡೀ ದೇಶ ಸಂತೋಷ ಪಡುವ ವಿಷಯವಾಗಿದೆ. ಯಾವುದೇ ರಾಜಕೀಯ ರಹಿತವಾಗಿ ಪಕ್ಷಬೇಧ ಮರೆತು ಭಾರತೀಯರಾದವರು ಸಂಭ್ರಮಪಡುತ್ತಾ ಇದ್ದಾರೆ ಆ ದಿನ ಪ್ರತಿ ಮನೆಯಲ್ಲಿ ದೀಪಗಳನ್ನು ಉರಿಸಿ, ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಮಾಡಬೇಕು. ದೀಪಾವಳಿ ಮಾದರಿಯಲ್ಲಿ ಹಬ್ಬವನ್ನು ಆಚರಿಸಿ ಸಂಭ್ರಮಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಮಭಕ್ತರಾದ ನಟರಾಜ್, ಮುರಳಿ, ನಾಗರಾಜ್, ಗಣೇಶ್, ಸುರೇಶ್, ಗೋವಿಂದ ಸ್ವಾಮಿ, ಮುಂತಾದವರು ಇದ್ದರು
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…