ಕೋಲಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ‘ಮೋದಿ ಮತ್ತೊಮ್ಮೆ’ ಎಂಬ ಗೋಡೆ ಬರಹ ಅಭಿಯಾನಕ್ಕೆ ಶುಕ್ರವಾರ ನಗರದಲ್ಲಿ ಬಿಜೆಪಿ ಮುಖಂಡ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಓಂಶಕ್ತಿ ಚಲಪತಿ, ದೇಶದಲ್ಲಿ ಪ್ರತಿಯೊಂದು ಬೂತ್ ನಲ್ಲಿ ಕನಿಷ್ಠ ಎರಡು ಕಡೆ ಮೋದಿ ಮತ್ತೊಮ್ಮೆ ಎಂದು ಬರೆಯಲು ರಾಜ್ಯ ಮತ್ತು ಕೇಂದ್ರದಿಂದ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ. ದೇಶದ ಸಮಗ್ರ ಅಭಿವೃದ್ಧಿಗಾಗಿ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿಯವರು ರೂಪಿಸಲು ಹೊರಟಿದ್ದಾರೆ. ಅದನ್ನು ಈಡೇರಿಸಲು ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ. ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡಾ ಬಿಜೆಪಿ ಮತ್ತು ಮೋದಿ ಅವರ ಮೇಲಿನ ಗೌರವದಿಂದ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸುಭದ್ರ ಭಾರತಕ್ಕಾಗಿ ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿರುವ ಪ್ರಧಾನಿ ಮೋದಿಯವರು ಭಾರತೀಯರ ಗ್ಯಾರಂಟಿಯಾಗಿದ್ದಾರೆ. ಈ ಗೋಡೆ ಬರಹ ಅಭಿಯಾನದಿಂದ ಇಡೀ ರಾಷ್ಟ್ರದಲ್ಲಿ ಒಂದು ರೀತಿಯ ಹೊಸ ಸಂಚಲನ ಮೂಡಲಿದ್ದು, ಮುಂದಿನ ಎರಡು ತಿಂಗಳು ಬಿಜೆಪಿಯ ಕಾರ್ಯಕರ್ತರು ಹಗಲು ರಾತ್ರಿ ದುಡಿದು ಬಿಜೆಪಿಯ ಲೋಕಸಭಾ ಅಭ್ಯರ್ಥಿಯನ್ನು ಗೆಲ್ಲಿಸಿ ದೇಶದ ಹೆಮ್ಮೆಯ ನಾಯಕ ಮೋದಿಯವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವಲ್ಲಿ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ದಿಶಾ ಸಮಿತಿ ಸದಸ್ಯ ಸಾ.ಮಾ ಬಾಬು, ಮುಖಂಡರಾದ ನಾಮಲ್ ಮಂಜು, ಎಬಿವಿಪಿ ಶಿಲ್ಲಂಗೆರೆ ಮಹೇಶ್, ನಾಗರಾಜ್ ಮುಂತಾದವರು ಇದ್ದರು
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…