ನವಜಾತು ಹೆಣ್ಣು ಶಿಶುವನ್ನು ತಾಯಿಯೊಬ್ಬಳು ಓಣಿಯೊಂದರಲ್ಲಿ ಬಿಸಾಡಿ ಹೋಗಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೆಣ್ಣುಮಗು ಎಂಬ ಕಾರಣಕ್ಕೆ ಗ್ರಾಮದಲ್ಲಿನ ಓಣಿಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮನಿಸಿ, ಬಟ್ಟೆಯಲ್ಲಿ ಸುತ್ತಿ ನಡು ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಾಹಿತಿ ತಿಳಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯರು ಮಗುವನ್ನು ರಕ್ಷಿಸಿ ಆರೈಕೆಗಾಗಿ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಲಾಗಿದೆ.