ಓವರ್ ಟೇಕ್ ತಂದ ಆಪತ್ತು: ಹೈವೇಲಿ ಉರುಳಿಬಿದ್ದ ಬೃಹತ್ ಕಂಟೈನರ್: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಸಮೀಪ ನಡೆದಿದೆ.

ಅಪಘಾತದ ಭೀಕರ ದೃಶ್ಯ ಸ್ಥಳೀಯ ಹೋಟೆಲ್ ವೊಂದರ ಸಿಸಿಟಿವಿಯಲ್ಲಿ ಸರಿಯಾಗಿದೆ.

ಹೈವೇಯಲ್ಲಿ ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಯಿಂದ ಮುಂದೆ ಸಾಗುವ ಭರದಲ್ಲಿ ಪಕ್ಕದಲ್ಲಿ ಇದ್ದ ಬೈಕ್ ಗಳನ್ನ ಸೈಡ್ ಹೊಡೆಯಲು ಹೋಗಿ ಲಾರಿ ಉರುಳಿಬಿದ್ದಿದೆ.

ಅದೃಷ್ಟವಶಾತ್ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಬೀಳೋದು ಜಸ್ಟ್ ಮಿಸ್ ಆಗಿ ಕಾರಿಗೆ ಟಚ್ ಆಗಿದೆ… ಇದ್ರಿಂದ ಕಾರಿನಲ್ಲಿದ್ದವರು ಬದುಕಿದೆವು ಅಂತ ಭಯದಿಂದಲೇ ಕಾರಿನಿಂದ ಇಳಿದಿದ್ದಾರೆ.

ಇನ್ನೂ ಲಾರಿ ಯಲ್ಲಿದ್ದ ಚಾಲಕ ಬಿಹಾರ ಮೂಲದ ಧರ್ಮೇoದ್ರ ಹಾಗೂ ಕ್ಲಿನರ್ ಲಾಲ್ ಚಂದ್ ಗಾಯಗೊಂಡಿದ್ದಾರೆ. ಇಬ್ಬರನ್ನು ದೇವನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ಅಂದಹಾಗೆ ಲಾರಿಯಲ್ಲಿ ಪ್ಲಾಸ್ಟಿಕ್ ಪೈಪ್ಗಳನ್ನ ತುಂಬಿದ್ದು ಮಧ್ಯಪ್ರದೇಶದ ಭೋಪಾಲ್ ನಿಂದ ಹೊಸಕೋಟೆಗೆ ತರಲಾಗುತ್ತಿತ್ತು ಅಂತ ತಿಳಿದುಬಂದಿದೆ.

Ramesh Babu

Journalist

Recent Posts

ನಿಗದಿಯಂತೆ ಭಾನುವಾರವೇ ಶ್ರೀರಾಮ ಶೋಭಾಯಾತ್ರೆ ಆಚರಣೆ

ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…

2 hours ago

ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ವರ್ಗಾವಣೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ…

4 hours ago

ಶ್ರೀರಾಮ ಶೋಭಾಯಾತ್ರೆ: ಡಿಜೆ ಅನುಮತಿಗಾಗಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶ್ರೀರಾಮ ಶೋಭಾಯಾತ್ರೆಗೆ ಡಿಜೆ ಪರ್ಮಿಷನ್ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿ ಎದುರು ಶ್ರೀರಾಮ ಭಜನೆ ಮಾಡುತ್ತಾ ಹಿಂದೂ…

4 hours ago

ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…

10 hours ago

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

14 hours ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

1 day ago